ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಉದ್ಘಾಟನಾ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಆದರೆ ಕೆಕೆಆರ್-ಆರ್‌ಸಿಬಿ ನಡುವೆ ನಡೆಯಲಿರುವ ಈ ಪಂದ್ಯವು ರದ್ದಾಗುವ ಸಾಧ್ಯತೆಯಿದೆ.
ಮಾರ್ಚ್ 22 ರವರೆಗೆ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹೀಗಾಗಿ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪಂದ್ಯವು ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಬಾರಿಯ ಐಪಿಎಲ್ ಆವೃತ್ತಿಯು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಗಲಿದೆ. ಈ ಸಮಾರಂಭದಲ್ಲಿ ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಪ್ರದರ್ಶನ ನೀಡಲಿದ್ದಾರೆ.
ಇನ್ನು ಕೋಲ್ಕತ್ತಾದ ಪ್ರಾದೇಶಿಕ ಹವಾಮಾನ ಕೇಂದ್ರವು ಮಾರ್ಚ್ 20 ರಿಂದ 22 ರವರೆಗೆ ಪಶ್ಚಿಮ ಬಂಗಾಳದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಪ್ರಾದೇಶಿಕ ಹವಾಮಾನ ಮುನ್ಸೂಚನಾ ಸಂಸ್ಥೆ, ”2025 ರ ಮಾರ್ಚ್ 20 ರಿಂದ 22 ರವರೆಗೆ ಪಶ್ಚಿಮ ಬಂಗಾಳದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದೆ.