ರಾಮನಗರ: ಖಾಸಗಿ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಕಂಪನಿಯ ಶೌಚಾಲಯದ ಗೋಡೆಯ ಮೇಲೆ “ಪಾಕಿಸ್ತಾನ ಜೈ” ಎಂದು ಬರೆಯಲಾಗಿದೆ.
ಅಲ್ಲದೇ, ಕನ್ನಡಿಗರು ಸೂ…ಮಕ್ಕಳು ಎಂದೂ ಬರೆಯಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ಯಾರು, ಯಾವಾಗ ಬರೆದಿದ್ದಾರೆ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಆದರೆ ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಂಪನಿ ಹೇಳಿದೆ. ಘಟನೆ ಖಂಡಿಸಿ ಕಂಪನಿ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಭಯೋತ್ಪಾದಕ ಕೃತ್ಯ ಎಸಗಿರುವ ಕಿಡಿಗೇಡಿ ವಿರುದ್ಧ ಗಂಭೀರ ಪ್ರಕರಣ ದಾಖಲು ಮಾಡಬೇಕು. ಕಿಡಿಗೇಡಿಯನ್ನು ಗಡಿಪಾರು ಮಾಡಬೇಕು. ಪ್ರಕರಣ ಮುಚ್ಚಾಕಲು ಯತ್ನಿಸಿದ್ದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಕನ್ನಡ ಮಂಜು ಆಗ್ರಹಿಸಿದರು. ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ