ಚಿತ್ರದುರ್ಗ: ಮುರುಘಾ ಶರಣರ ವಿರುದ್ಧದ ಪೋಕ್ಸೊ ಕರಣಕ್ಕೆ ಸಂಬಂಧಿಸಿದಂತೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಾಗುವುದು.
ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಬೆಳಗ್ಗೆ 11:30 ಬೆಳಗ್ಗೆ ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಆರೋಪ ಸಾಬೀತಾದರೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ.































