ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ಗಳನ್ನು ಅಪ್ಲೋಡ್ ಮಾಡುವ ಮುನ್ನ ನೀವು ಜಾಗರೂಕರಾಗಿರಬೇಕಾದದ್ದು ಬಹಳ ಮುಖ್ಯ. ಈ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಸಾರ್ವಜನಿಕ ವ್ಯಕ್ತಿಗಳ ಬಗ್ಗೆ, ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಹಾಕುವುದು, ಆದಾದ ಬಳಿಕ ಕೇಸ್ ಹಾಕಿಸಿಕೊಂಡು ಪೊಲೀಸರಿಂದ ಬಂಧನಕ್ಕೊಳಗಾದ ಜನರು ಇದ್ದಾರೆ.
ಚಿತ್ರನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿರನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಿಂದಿಸಿ ಅನೇಕರು ಈಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಜೊತೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರನ್ನು ನಿಂದಿಸುವುದನ್ನು ಕೆಟ್ಟ ಪ್ರವೃತ್ತಿಯಾಗಿ ಬೆಳೆಸಿಕೊಂಡಿದ್ದಾರೆ. ಅಂಥವರಿಗೆ ಪೊಲೀಸ್ ಇಲಾಖೆಯ ಈ ಎಚ್ಚರಿಕೆ ಅನ್ವಯವಾಗುತ್ತೆ.