ಭಟ್ಕಳ : ನಗರದ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹೊನ್ನಾವರದಲ್ಲೂ ಇಂತದ್ದೇ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಹಿಡಿದು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದರು.
ಇದೀಗ ಮತ್ತೆ ಇಂತಹದ್ದೇ ದುರುಳರ ವಿಕೃತಿಯ ಘಟನೆ ಭಟ್ಕಳದಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕ್ರಮಕ್ಕೆ ಆಗ್ರಹಿಸಿದ್ದಾರೆ.