ದಾವಣಗರೆ: ಜ.11-12 ರಂದು ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಗಳು ಹೀಗಿವೆ.!

WhatsApp
Telegram
Facebook
Twitter
LinkedIn

 

ದಾವಣಗೆರೆ: ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ  ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಜನವರಿ 11 ರಂದು ಬೆಳಿಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು.ಜಗಳೂರು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ಹಾಡುವರು.

ಅಂದು ಬೆಳಿಗ್ಗೆ 9 ಗಂಟೆಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ,  ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾದ ಲೋಕಮ್ಮ  ಜೆ ಸಿ ಓಬಣ್ಣ, ಡಿ.ಡಿ.ಪಿ.ಯು ಕರಿಸಿದ್ದಪ್ಪ ಎಸ್.ಜಿ,  ಡಿ.ಡಿ.ಪಿ.ಐ ಕೋಟ್ರೇಶ್.ಜಿ, ಜಗಳೂರು ವೃತ್ತ ನಿರೀಕ್ಷಕರು ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ, ಸಿ.ಇ.ಓ ಕೆಂಚಪ್ಪ, ಜಗಳೂರು ಬಿ.ಇ.ಓ ಹಾಲಮೂರ್ತಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು. ಮೆರವಣಿಗೆ ತಾಲೂಕು ಕಚೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಯಲು ರಂಗಮಂದಿರವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯುತ್ತದೆ.

ಡೊಳ್ಳು ಕುಣಿತ,ಹಗಲುವೇಷ, ಬೊಂಬೆ ಮೇಳ, ಉರುಮೆ, ತಪ್ಪಡಿ, ಕಹಳೆ, ವೀರಗಾಸೆ, ಕರಡಿ ಮಜಲು, ನಂದಿಧ್ವಜ, ಭಜನೆ, ಕೋಲಾಟ, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧ ಚಿತ್ರಗಳು ಇತ್ಯಾದಿ

ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕರಾದ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು.

ಸಂಸ್ಕøತಿ ಚಿಂತಕರು ಸಾಹಿತಿಗಳಾದ ಡಾ.ಎ.ಬಿ.ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆಯನ್ನು ಉದ್ಘಾಟಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿ ತೇರು ಸ್ಮರಣ ಸಂಚಿಕೆಯ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಜೆ.ಎಂ ಇಮಾಮ್ ಮಹಾದ್ವಾರವನ್ನು ಉದ್ಘಾಟಿಸುವರು. ಕ.ಸಾ.ಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ.ಟಿ.ತಿಪ್ಪೇಸ್ವಾಮಿ ಸಭಾಂಗಣವನ್ನು ಉದ್ಘಾಟಿಸುವರು. ನಿಕಟ ಪೂರ್ವ ಸಮ್ಮೇಳಧ್ಯಕ್ಷರಾದ ಪ್ರೊ.ಸಿ.ವಿ ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ ರಾಮಚಂದ್ರಪ್ಫ, ಹೆಚ್.ಪಿ.ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.

ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ.ಎಸ್.ಬಿ ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್ ನವೀನ್ ಕುಮಾರ್ ಡಾ.ಎಂ.ಜಿ.ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ಹರಿಹರ ಶಾಸಕರಾಧ ಬಿ.ಪಿ ಹರೀಶ್, ಚನ್ನಗಿರಿ ಶಾಸಕರಾದ ಬಸವರಾಜ ವಿ. ಶಿವಗಂಗ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್ ಜಯದೇವ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ನಾ.ರವಿಕುಮಾರ, ಡಿ.ಟಿ.ಶ್ರೀನಿವಾಸ್, ಡಾ.ಚಿದಾನಂದ ಎಂ.ಗೌಡ, ಜಿ.ಸ.ನೌ ಸಂಘದ ಅಧ್ಯಕ್ಷರಾದ ವೀರೇಶ್ ಎಸ್ ಒಡೇನಪುರ, ಜಿಲ್ಲಾ ವರದಿಗಾರರ ಕೂಟ ನಾಗರಾಜ್.ಎಸ್ ಬಡದಾಳ್, ಯುವ ಮುಖಂಡರಾದ ಕೆ.ಪಿ ಪಾಲಯ್ಯ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಕುರ್ಕಿ, ತಾ.ಸ.ನೌ ಸಂಘದ ಎ.ಎಲ್ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿಯಿಯ ಅಧ್ಯಕ್ಷರಾದ ಜಿ.ರುದ್ರಯ್ಯ, ಪ್ರಗತಿಪರ ಕೃಷಿಕರು ಕಲ್ಲೇರುದ್ರೇಶ್ ಪಾಲ್ಗೋಳ್ಳುವರು.

ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-1ರಲ್ಲಿ. ಸಾಹಿತ್ಯ ಮತ್ತು ಸಾಮಾಜಿಕ ನೆಲೆಗಳು, ಮಧ್ಯಾಹ್ನ 3:45 ಕ್ಕೆ ಗೋಷ್ಠಿ -2ರಲ್ಲಿ ಸೌಹಾರ್ದತೆ- ಸಮಾನತೆ-ಸಾಮಾಜಿಕ ನ್ಯಾಯ, ಗೋಷ್ಠಿ-3ರಲ್ಲಿ ಸಂಜೆ 5.30ಕ್ಕೆ ದಾವಣಗೆರೆ ಜಿಲ್ಲೆಯ ಐತಿಹಾಸಿಕ ನೆಲೆಗಳು, ಗೋಷ್ಠಿಗಳು ನಡೆಸಲಾಗುವುದು.

ಸಂಜೆ 6:15 ಗಂಟೆಗೆ ಜಗಳೂರು ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ನಂತರ ಡಾ. ಶುಭಾ ಮರವಂತೆ, ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತವೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon