ದಾವಣಗೆರೆ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೆಲ್ಟ್, ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2,250/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 1,800/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ.
ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕ ರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸಲಾಗಿದೆ.
ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದಲ್ಲಿ ರೈತರು ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.