ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.
ಬಹುಮತಕ್ಕೆ ಬೇಕಾದ ಸಂಖ್ಯೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಬೆಳಗ್ಗೆ 9:30ರ ಟ್ರೆಂಡ್ ಪ್ರಕಾರ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. 11:30 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳಲ್ಲಿ ಹಾಗೂ ಆಪ್ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಕಾಂಗ್ರೆಸ್ ಸತತ ಮೂರನೇ ಬಾರಿಯೂ ಒಂದೇ ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆಯಲು ವಿಫಲವಾಗಿದೆ.