ಚಿತ್ತಾಪುರ: ಆರ್‌ಎಸ್‌ಎಸ್ (RSS) ಪಥಸಂಚಲನ ಸಂಬಂಧ ಕೋರ್ಟ್, ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್ಎಸ್ಎಸ್ಗೆ ಹಿನ್ನಡೆಯಾದಂತಾಗಿದೆ.
































