ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮೇ.22ರಿಂದ ಪರೀಕ್ಷೆ ಆರಂಭಗೊಂಡು, ಜೂನ್ 2ರಂದು ಮುಕ್ತಾಯಗೊಳ್ಳಲಿದೆ.
ಮೇ ಹಾಗೂ ಜೂನ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 22-05-2023ರಿಂದ 02-06-2023ರವರೆಗೆ ನಡೆಸಲು ಮಂಡಳಿಯು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.