ಬೆಂಗಳೂರು: ಕಳೆದ ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ಮುಕ್ತಾಯಗೊಂಡಿತ್ತು. ಲಕ್ಷಾಂತರ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯನ್ನು ಬರೆದಿದ್ದರು. ಇದೀಗ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದು ಎಪ್ರಿಲ್ ಹನ್ನೊಂದರ ಒಳಗೆ ಪ್ರಕಟವಾಗುವ ಸಾಧ್ಯತೆ ಇದೆ.
ಪಿಯು ಅಂತಿಮ ಪರೀಕ್ಷೆ ಮಾರ್ಚ್ ಒಂದರಿಂದ ಆರಂಭಗೊಂಡು ಮಾರ್ಚ್ ಇಪ್ಪತ್ತರವರೆಗೆ ಅಚ್ಚುಕಟ್ಟಾಗಿ ನಡೆದಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು ಏಳು ಲಕ್ಷಕ್ಕೂ ಅಧಿಕ ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇದೀಗ ವ್ಯಾಲ್ಯುಯೇಷನ್ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದ್ದು ಫಲಿತಾಂಶ ಅಂತಿಮಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಆದ್ದರಿಂದ ಈ ಬಾರಿಯೂ ಎಪ್ರಿಲ್ ಹನ್ನೊಂದರ ಒಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.