ಬೆಂಗಳೂರು : ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೇರ ನಗದು ವರ್ಗಾವಣೆ ಬದಲಾಗಿ 5 ಕೆಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯ ಆದೇಶಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.
ಇದರ ಜೊತೆಗೆ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಇದಲ್ಲದೆ ಐದು ಪ್ರಮುಖ ವಿಧೇಯಕಗಳ ಅನುಮೋದನೆ ನೀಡಲಾಗಿದೆ.