ಬೆಂಗಳೂರು : ರಾಜ್ಯ ಸರಕಾರವು 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪುತ್ತೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ಜುಬೀನ್ ಮಹಾಪಾತ್ರ ಅವರನ್ನು ರಾಯಚೂರು ನಗರ ಪಾಲಿಕೆಯ ಆಯುಕ್ತ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ) ಶಿಂಧೆ ಅವಿನಾಶ್ ಸಂಜೀವನ್‍ರನ್ನು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ನಿಯಮಿತ(ಬೆಸ್ಕಾಂ)ದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ನಿಯಮಿತ(ಬೆಸ್ಕಾಂ)ದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರನ್ನು ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೆ.ಸ್ವರೂಪಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕಿ(ಇ-ಆಡಳಿತ) ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಡಾ.ಅನುರಾಧಾರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಹಾಗೂ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೊಡ್ಕೆ ಅವರನ್ನು ಕೆಎಸ್ಸಾರ್ಟಿಸಿ ನಿರ್ದೇಶಕ(ಐಟಿ)ರನ್ನಾಗಿ ವರ್ಗಾವಣೆ ಮಾಡಲಾಗಿದೆ. ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಪಾಟೀಲ್ ಭುವನೇಶ್ ದೇವಿದಾಸ್ ಅವರನ್ನು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಬೆಂಗಳೂರಿನ ನೋಂದಣಿ ಇಲಾಖೆಯ ಡಿಐಜಿ ಅನ್ಮೋಲ್ ಜೈನ್‍ರನ್ನು ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
