ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಆಡಳಿತಯಂತ್ರದಲ್ಲಿ ಹಲವು ಬದಲಾವಣೆ ಮಾಡಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಹಲವು ಅಧಿಕಾರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ನೀಡಿ ಆದೇಶವನ್ನು ಹೊರಡಿಸಿದೆ. ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್ ಪಿ. ಅವರಿಗೆ ಸಹ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು) ಆದೇಶವನ್ನು ಹೊರಡಿಸಿದ್ದಾರೆ. ಅಧಿಕಾರಿಗಳ ಪಟ್ಟಿ * ಮೇಜರ್ ಮಣಿವಣ್ಣನ್ ಪಿ. (ಕೆಎನ್: 1988). ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು. ಇವರನ್ನು ಈ ಹುದ್ದೆಯ ಜೊತೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ, ಬೆಂಗಳೂರು ಹುದ್ದೆಗೆ ತತ್ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಅಜಯ್ ನಾಗಭೂಷಣ್ ಎಂ. ಎನ್. ಬಿಡುಗಡೆಗೊಳಿಸಲಾಗಿದೆ. * ವಿ. ಅನ್ಬು ಕುಮಾರ್ (ಕೆಎನ್: 2004) ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಬೆಂಗಳೂರು. ಈ ಹುದ್ದೆಯ ಜೊತೆಗೆ ತತ್ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಪಶುಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಅಜಯ್ ನಾಗಭೂಷಣ್ ಎಂ. ಎನ್. ಬಿಡುಗಡೆಗೊಳಿಸಲಾಗಿದೆ. * ಮನೋಜ್ ಜೈನ್ (ಕೆಎನ್: 2006) ಸರ್ಕಾರದ ಕಾರ್ಯದರ್ಶಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ತತ್‌ಕ್ಷಣದಿಂದ ವರ್ಗಾವಣೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ನೇಮಕ ಮತ್ತು ಯೋಜನೆ ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. * ಸಲ್ಮಾ ಕೆ. ಫಹೀಮ್ (ಕೆಎನ್: 2006) ಸರ್ಕಾರದ ಕಾರ್ಯದರ್ಶಿ ಪ್ರವಾಸೋದ್ಯಮ ಇಲಾಖೆ, ಬೆಂಗಳೂರು. ಈ ಹುದ್ದೆಯ ಜೊತೆಗೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಸಿ. ಶಿಖಾ ಬಳಿಕ ಕರ್ನಾಟಕದ ಮತ್ತೊಬ್ಬ ಐಎಎಸ್ ಅಧಿಕಾರಿ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದು, ಅವರನ್ನು ರಾಜ್ಯ ಸರ್ಕಾರದಿಂದ ಕಾರ್ಯಗಳಿಂದ ಬಿಡುಗಡೆಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ. ಡಾ. ಅಜಯ್ ನಾಗಭೂಷಣ್ ಎಂ. ಎನ್. (ಕೆಎನ್: 2004) ಅವರು ಜಂಟಿ ಕಾರ್ಯದರ್ಶಿ ಭಾರತ ಸರ್ಕಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹುದ್ದೆಗೆ ನೇಮಕಗೊಂಡಿದ್ದಾರೆ. ಫೆಬ್ರವರಿ 1ರಂದು ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ.
