ವಾಷಿಂಗ್ಟನ್ : 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿ ನೀಡಿದೆ.
ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವುರ್ ರಾಣಾ ಹಸ್ತಾಂತರಕ್ಕೆ ಸಮ್ಮತಿಸಿದೆ. ಶೀಘ್ರದಲ್ಲೇ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಆರಂಭವಾಗಲಿದೆ.
ರಾಣಾ ಹಸ್ತಾಂತರವನ್ನು ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ರಾಣಾ ಮನವಿಯನ್ನು ವಜಗೊಳಿಸಿರುವ ಕೋರ್ಟ್, ಭಾರತಕ್ಕೆ ಹಸ್ತಾಂತರಿಸಲಿದೆ ಎಂದು ಆದೇಶ ಹೊರಡಿಸಿದೆ.
ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವುದರ ವಿರುದ್ಧ ಕಳೆದ ನವಂಬರ್‌ನಲ್ಲಿ ಅಮೆರಿಕ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ರಿಟ್ ಅರ್ಜಿಯನ್ನು ತಿರಸ್ಕರಿಸಿದ್ದು, ದಾಳಿ ಅಪರಾಧಿಯನ್ನು ಭಾರತಕ್ಕೆ ಹಸ್ತಾಂತರಿಸಲು ಸಮ್ಮತಿಸಿದೆ.