ಬೆಂಗಳೂರು: ಡಿಸೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ವಾಯುಭಾರ ಕುಸಿತದ ತೀವ್ರತೆ ಕಡಿಮೆಯಾಗಿರುವುದರಿಂದ ಶನಿವಾರದಿಂದ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ವಾತಾವರಣ ಇರಲಿದೆ. ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.
 
				 
         
         
         
															 
                     
                     
                     
                     
                    


































 
    
    
        