ಚಿತ್ರದುರ್ಗ : ಯುವ ಜನಾಂಗ ಮತದಾನದಿಂದ ವಂಚಿರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸಿಗೆ ಅಮೂಲ್ಯವಾದ ಮತದಾನ ಮುಖ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗಾರೆಹಟ್ಟಿಯಲ್ಲಿರುವ ಬೃಹನ್ಮಠ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ವೀಪ್ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗದ ಆಶಯದಂತೆ ಎಲ್ಲಾ ಚುನಾವಣೆಗಳಲ್ಲಿ ಶೇ.100 ರಷ್ಟು ಮತದಾನವಾಗಬೇಕು. ಮತದಾರರು ತಪ್ಪದೆ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವುದಕ್ಕಾಗಿ ಇಂತಹ ಸ್ಪರ್ಧೆಗಳು ಅತ್ಯವಶ್ಯಕ ಎಂದರು.
ಜಿಲ್ಲಾ ಪಂಚಾಯಿತಿ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸುಮ ಮಾತನಾಡಿ ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಇದರಲ್ಲಿ ವಿಜೇತರಾದವರಿಗೆ ಜ.25 ರಂದು ಜಿಲ್ಲಾಡಳಿತದಿಂದ ಬಹುಮಾನಗಳನ್ನು ವಿತರಿಸಲಾಗುವುದೆಂದು ತಿಳಿಸಿದರು.
ಡಿ.ಡಿ.ಪಿ.ಐ. ಕಚೇರಿಯ ವಿಷಯ ಪರಿವೀಕ್ಷಕ ಮತ್ತು ನೋಡಲ್ ಅಧಿಕಾರಿ ಪ್ರಶಾಂತ್ ಕೆ.ಜಿ. ವಿಷಯ ಪರಿವೀಕ್ಷಕರುಗಳಾದ ಚಂದ್ರಣ್ಣ, ಗೋವಿಂದಪ್ಪ, ಮಹಲಿಂಗಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀನಿವಾಸ, ಬೃಹನ್ಮಠ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾರಾಣಿ, ಆಂಗ್ಲ ಭಾಷೆ ಶಿಕ್ಷಕ ಸಿದ್ದೇಶ್, ತೀರ್ಪುಗಾರರು ಈ ಸಂದರ್ಭದಲ್ಲಿ ಹಾಜರಿದ್ದರು