ಬೆಂಗಳೂರು: ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಶನಿವಾರವು ನಗರದ ವಿವಿಧ ಬಡಾವಣೆಗಳಲ್ಲಿ ಗುಡುಗು ಸಹಿತ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಯಿತು. ಮಳೆ, ಗಾಳಿಗೆ ವಿವಿಧೆಡೆ ಮರಗಳು ಉರುಳಿದ್ದು, ಚಾಮರಾಜಪೇಟೆ, ಅಶೋಕನಗರ, ಹಲಸೂರು, ಮೆಜೆಸ್ಟಿಕ್, ದೀಪಾಂಜಲಿ ನಗರ, ಕಾಮಾಕ್ಷಿಪಾಳ್ಯ, ಮಲ್ಲೇಶ್ವರ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ.