Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗ ಇಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ.!

0

 

ದಾವಣಗೆರೆ:  ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಸೂಚನೆ ನೀಡಿದರು.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ಧಾಕ್ಷೀಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಬೇಕು. ಅವರು ಪ್ರತಿನಿಧಿ, ಅಧಿಕಾರಿಗಳು ಜನ ಸೇವಕರು, ಜನರ ಕಷ್ಟ, ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ವಿಳಂಬ ಮಾಡಬಾರದು. ವಿಳಂಬ ಮಾಡುವುದು ಸಹ ಒಂದು ರೀತಿಯ ಭ್ರಷ್ಟಾಚಾರ ಮಾಡಿದಂತೆ. ಜಿಲ್ಲಾ ಮಟ್ಟದಲ್ಲಿ ಜನಸ್ನೇಹಿ ಆಡಳಿತ ಇರಬೇಕು. ಜನರು ಕಚೇರಿಗಳಿಗೆ ಬಂದಾಗ ಗೌರವಯುತವಾಗಿ ನಡೆದುಕೊಂಡು, ಕಷ್ಟಗಳಿಗೆ ಪರಿಹಾರ ಮಾಡುವುದಲ್ಲದೇ ಜನರ ಜೊತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದರು.

ದಾವಣಗೆರೆ ಜಿಲ್ಲೆ ಇನ್ನಷ್ಟು ಪ್ರಗತಿ; ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ. ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ. ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳ ಕ್ಷೇತ್ರ ಭೇಟಿಗೆ ಸೂಚನೆ; ಜಿಲ್ಲಾಧಿಕಾರಿ ತಹಶೀಲ್ದಾರರ ಕಚೇರಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.

Leave A Reply

Your email address will not be published.