ದಾವಣಗೆರೆ: ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಬಿಳಿಚೋಡು, ಪಲ್ಲಾಗಟ್ಟೆ ಮತ್ತು ಸೊಕ್ಕೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 26 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ.
ಎಲ್ಲಾ ಎನ್.ಜೆ.ವೈ (NJY) ಮತ್ತು ಐ.ಪಿ (IP) ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕೆಂದು ಜಗಳೂರು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.































