ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕೆ .! ತೃತೀಯ ಭಾಷೆ ಪರೀಕ್ಷೆ ನಾಳೆ
ಬೆಂಗಳೂರು: 2026ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ಮಾರ್ಚ್ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ಈ ಹಿಂದೆ ಘೋಷಿಸಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ಕ್ಕೆ (ಸೋಮವಾರ) ಬದಲಾಯಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಲಾಗಿದೆ.
ಮಾರ್ಚ್ 30ರ ಬದಲಾಗಿ ಮಾರ್ಚ್ 31, 2026 (ಮಂಗಳವಾರ) ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಸಮಯ ಮತ್ತು ಕೇಂದ್ರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ಮೊದಲೇ ನಿಗದಿಪಡಿಸಿದ ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯಲಿವೆ. ಈ ಬದಲಾವಣೆಯನ್ನು ಪೋಷಕರು ಮತ್ತು ವಿದ್ಯಾರ್ಥಿಗಳು ಗಮನಿಸಬೇಕೆಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































