ಚಿತ್ರದುರ್ಗ: ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ (Self Declaration) ಮಾಡಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ಹತ್ತಿರದ ಚಿತ್ರದುರ್ಗ ಒನ್/ಗ್ರಾಮ ಒನ್ ಸೆಂಟರ್ಗಳಲ್ಲಿ ದಿನಾಂಕ:25-11-2025ರೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕು ಎಂದು ಈ ಮೂಲಕ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ-9945587060, 7019755147 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.































