ಕಲಬುರಗಿ : ರಾಜ್ಯದಲ್ಲಿ ಮಳೆ, ನೆರೆಯಿಂದಾಗಿ ಸಂಭವಿಸಿದ ಬೆಳೆಹಾನಿಗೆ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯ (ಎನ್‌ಡಿಆರ್‌ಎಫ್) ನಿಯಮದಂತೆ ಕೇಂದ್ರದಿಂದ ನೀಡಲಾಗುವ ಪರಿಹಾರದ ಜೊತೆಗೆ, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ 8,500 ರು.ಸೇರಿಸಿ ನೊಂದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಲ್ಲದೆ, ಕೇಂದ್ರದ ನೆರವಿಗೆ ಕಾಯದೇ ಸಮೀಕ್ಷೆ ಮುಗಿದ ನಂತರ ರಾಜ್ಯ ಪಾಲಿನ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಅವರು ಪ್ರವಾಹ ಪೀಡಿತ ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ವ್ಯಾಪ್ತಿಯಲ್ಲಿ 2 ಸುತ್ತು ವೈಮಾನಿಕ ಸಮೀಕ್ಷೆ ನಡೆಸಿದರು. ಈ ನಡುವೆ, ಅಧಿಕಾರಿಗಳ ಜತೆ ಸಭೆ ನಡೆಸಿ ಅವರು ಸುದ್ದಿಗಾರರಿಗೆ ನೆರೆ ಪರಿಹಾರದ ವಿವರ ನೀಡಿದರು.