ಚೆನ್ನೈ: ತಮಿಳುನಾಡಿನಲ್ಲಿ RSS ರ್‍ಯಾಲಿಗಳ ಕುರಿತು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸ್ಟಾಲಿನ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇದರಿಂದ ತಮಿಳುನಾಡಿನಲ್ಲಿ RSS ರ್‍ಯಾಲಿಗಳಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರ್‍ಯಾಲಿ ನಡೆಸಲು RSS ನಿರ್ಧರಿಸಿತ್ತು. ಇದಕ್ಕೆ ಸ್ಟಾಲಿನ್ ಸರ್ಕಾರ ಅನುಮತಿ ನೀಡಿರಲಿಲ್ಲ. RSS ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿ ಅನುಮತಿ ನೀಡಿತ್ತು. ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸ್ಟಾಲಿನ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.