ಚಿತ್ರದುರ್ಗ : ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು.
ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು. ಮಧ್ಯಾಹ್ನ 3.33 ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.
ರಥೋತ್ಸವಕ್ಕೂ ಮುನ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ನಡೆಸಲಾಯಿತು. ಈ ವರ್ಷದ ಮುಕ್ತಿ ಬಾವುಟವನ್ನು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹೆಂಜಲಗೆರೆಯ ಶ್ರೀನಾಥ್ ಅವರು ರೂ.32 ಲಕ್ಷ ಗಳಿಗೆ ಹರಾಜು ಮೂಲಕ ಪಡೆದುಕೊಂಡರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಸೇರಿದಂತೆ ಮತ್ತಿತರರು ಇದ್ದರು.































