ಕಲಬುರಗಿ: ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಬಂಧಿ ಕೈದಿಗಳು ಪರಾರಿಯಾಗಿದ್ದಾರೆ.
ಪರಾರಿಯಾದ ಕೈದಿಗಳು ಮಸ್ತಾನ್, ಸಂತೋಷ್, ಸಾಗರ್ ಎಂದು ತಿಳಿದುಬಂದಿದೆ. ಬೀದರ್ ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಗಾಗಿದ್ದರು. ತಡರಾತ್ರಿ ಮೂರು ಗಂಟೆ ವೇಳೆಗೆ ಜೈಲಿನ ಕಾಂಪೌಂಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಜೈಲಿನಿಂದ ಮೂವರು ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿ ಸಹಕಾರ ನೀಡಿದ ಆರೋಪ ಕೇಳಿ ಬಂದಿದೆ. ಮಧ್ಯರಾತ್ರಿ ಲಾಕಪ್ ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಏಕೆ ಹೊರಗೆ ಬಿಟ್ಟರು ಎನ್ನುವ ಪ್ರಶ್ನೆ ಎದುರಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(AI ಚಿತ್ರ)
































