ಬೆಂಗಳೂರು; ಫೆಂಗಲ್ ಚಂಡಮಾರುತದ ಅಬ್ಬರ ತಗ್ಗಿದರೂ ಅದರ ಎಫೆಕ್ಟ್ ಇನ್ನೂ ಕಡಿಮೆಯಾಗುತ್ತಿಲ್ಲ.!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೂ ಕೂಡ ಮಳೆ ಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.