ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗಾಗಿ ಸರ್ಕಾರ ಮೂರು ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಯೋಜನೆಗಳ ವಿವರ:
- ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ: ಶಸ್ತ್ರಚಿಕಿತ್ಸೆಯ ಮೂಲಕ ಅಂಗವಿಕಲತೆ ಕಡಿಮೆ ಮಾಡುವ ಅಥವಾ ನಿವಾರಣೆಗೆ 1 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುತ್ತದೆ.
- ನಿರಾಮಯ ಆರೋಗ್ಯ ವಿಮಾ ಯೋಜನೆ: ಬಡತನ ರೇಖೆಗಿಂತ ಕೆಳಗಿನ ಕುಟುಂಬದ ವಿಕಲಚೇತನರು ವಾರ್ಷಿಕ 250 ರೂ. ಪಾವತಿಸಿ, 1 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು.
- ಕಾಕ್ಲಿಯರ್ ಇಂಪ್ಲಾಂಟ್ ಯೋಜನೆ: ತೀವ್ರ ಶ್ರವಣದೋಷ ಹೊಂದಿರುವ 6 ವರ್ಷಕ್ಕೂ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ಶ್ರವಣ ಸಾಧನ ಮತ್ತು ಥೆರಪಿ ಚಿಕಿತ್ಸೆ ಒದಗಿಸಲಾಗುತ್ತದೆ.
2016-17 ರಿಂದ ಈವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ವಿಕಲಚೇತನರಿಗಾಗಿ ಕೈಗೊಳ್ಳುತ್ತಿರುವ ಯೋಜನೆಗಳ ಕುರಿತು ಶಾಸಕ ವೈ.ಎಂ. ಸತೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.