ಇಂದೋರ್ : ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಣಿವೆ ಬಸ್ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಸಿಮ್ರೋಲ್ ಪ್ರದೇಶದಲ್ಲಿ ಬಸ್ ಕಣಿವೆಗೆ ಉರುಳಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಸುಮಾರು 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭೇರು ಘಾಟ್ನ ಗುಡ್ಡಗಾಡು ಪ್ರದೇಶದ ಬಳಿ ಈ ದುರಂತ ಘಟನೆ ನಡೆದಿದೆ. ಓಂಕಾರೇಶ್ವರದಿಂದ ಇಂದೋರ್ಗೆ ಹೋಗುತ್ತಿದ್ದ ಬಸ್ ಬೆಟ್ಟ ಹತ್ತುವಾಗ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
				
															
                    
                    
                    
                    
                    































