ಭಾರತೀಯ ಕೋಸ್ಟ್ ಗಾರ್ಡ್ನ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿಯ ವೇಳೆ ಪತನಗೊಂಡ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್‌ಗಳು ಸೇರಿ ಮೂವರು ಪ್ರಯಾಣಿಸುತ್ತಿದ್ದರು.ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.