ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಐದು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಲ್ಲಿ 27ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ’ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ಕೆಲವೆಡೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಕಡೆ ಭಾನುವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹೇಳಿದೆ.