ಬೆಂಗಳೂರು : ಇಂದಿನಿಂದ ಮುಂದಿನ ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡೊಗು ಜಿಲ್ಲೆಗಳಲ್ಲಿ ಮುಂದಿನ 5 ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನವರೆಗೆ ರಾಜ್ಯದ ಹಲವಡೆ ಮಳೆಯಾಗಿದ್ದು, ಕಲಬುರಗಿಯಲ್ಲಿ ದಾಖಲೆಯ 41.5 ಡಿ.ಸೆ. ತಾಪಮಾನ ದಾಖಲಾಗಿದೆ.
ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 19 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಕೊಪ್ಪಳ ಮತ್ತು ಯಾದಗರಿ ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.