ಬೆಂಗಳೂರು: ಉತ್ತರ ಒಳನಾಡಿನ ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಯ ಕೆಲವು ಭಾಗದಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತ್ತಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಒಂದೆರಡು ಕಡೆ ಮಳೆಯಾಗುವ ಸೂಚನೆ ನೀಡಿದೆ.
ನಿನ್ನೆ ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 7 ಸೆಂ.ಮೀ, ರಾಮನಗರದಲ್ಲಿ 6 ಸೆಂ.ಮೀ, ಕೋಲಾರ ಜಿಲ್ಲೆಯ ಮಾಲೂರು, ತುಮಕೂರಿನ ವೈ.ಎನ್.ಹೊಸಕೋಟೆ, ಕನಕಪುರದಲ್ಲಿ 5, ರಾಯಚೂರು, ಮೈಸೂರಿನ ಸರಗೂರು, ಚಿತ್ರದುರ್ಗದ ಪರಶುರಾಂಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.!