ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ವತಿಯಿಂದ “ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ-2025” ಕಾರ್ಯಕ್ರಮವನ್ನು ಇದೇ ಫೆ.26 ರಿಂದ 28 ರವರೆಗೆ ಬೆಂಗಳೂರು ಇಂಟರ್‍ನ್ಯಾಷನಲ್ ಕನ್‍ವೆನ್‍ಷನ್ ಸೆಂಟರ್‍ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೋಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರ-ಕುಶಲಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ಹೋಲ್ಡ್‍ರ್‍ಗಳಿಗೆ ವ್ಯಾಪಾರ-ವಹಿವಾಟು ಮಾಡಿಕೊಳ್ಳಲು ಸುಮಾರು ನೂರಾರು ವಿದೇಶಿ ಸಂಸ್ಥೆಗಳು-ದೇಶದ ಎಲ್ಲಾ ಭಾಗದ ಪಾಲದಾರರ ಸಂಸ್ಥೆಗಳಿಗೆ ಬಿಸಿನೆಸ್ ಟು ಬಿಸಿನೆಸ್ ಭಾಗವಹಿಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿರುವ ಹೋಟೆಲ್ ಉದ್ದಿಮೆದಾರರು, ಟ್ರಾವೇಲ್ ಏಜೆನ್ಸಿ ಹೋಂ-ಸ್ಟೇ ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್‍ಗಳಿಗೆ ತಮ್ಮ ಉದ್ದಿಮೆಗಳನ್ನು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಐ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡಲು ಸುವರ್ಣಾವಕಾಶ ಇರುತ್ತದೆ.
ಈ ಕಾರ್ಯಕ್ರಮದಲ್ಲಿ ವ್ಯಾಪಾರ ಮಳಿಗೆಗಳನ್ನು ಕಾಯ್ದಿರಿಸಲು ಆಸಕ್ತಿ ಹೊಂದಿರುವ ಉದ್ದಿಮೆದಾರರು ಕೂಡಲೇ, ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಹೆಚ್.ಶಶಿಕುಮಾರ್ ಅವರನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗೆ ಜಾಲತಾಣ https://www.karnatakatravelexpo.org ಮತ್ತು https://register.karnataka travelexpo.org/ Users ಗೆ ಭೇಟಿ ನೀಡಿ ಮತ್ತು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಕಛೇರಿಯನ್ನು ಹಾಗೂ ಜಿಲ್ಲಾ ಸಮಲೋಚಕರು (ಡಿಟಿಸಿ) ಅವರ ಮೊಬೈಲ್ ಸಂಖ್ಯೆ 9901948850, ಕಚೇರಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.