ಮುಂಬೈ : ತೀವ್ರ ಹಗ್ಗ ಜಗ್ಗಾಟದ ನಡುವೆ ಕೊನೆಗೂ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ಇಂದು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಮೂವರು ಪ್ರಮುಖ ನಾಯಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ ಆಜಾದ್ ಮೈದಾನದಲ್ಲಿ ಮೂವರು ನಾಯಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Today, Devendra Fadnavis is the new Chief Minister of Maharashtra.