ನವದೆಹಲಿ: ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಇಂದು (ಜ.7) ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದೆ. ಅದರಂತೆ ದೆಹಲಿ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಸಮಿತಿ ಇಂದು ಮಧ್ಯಾಹ್ನ ಎರಡು ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಈ ವೇಳೆ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ.