ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕಾಡಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆಗೆ ಜನವರಿ 8 ರ ರಾತ್ರಿಯಿಂದ ಹಾಗೂ ಎಡದಂಡ ನಾಲೆಗೆ ಜನವರಿ 3 ರ ರಾತ್ರಿಯಿಂದ ನೀರನ್ನು ಹರಿಸಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆಯಲ್ಲಿ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
































