ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಲೋಕದಂತೆ ಬಾರರು, ಲೋಕದಂತೆ ಇರರು,
ಲೋಕದಂತೆ ಹೋಗರು, ನೋಡಯ್ಯ.
ಪುಣ್ಯದಂತೆ ಬಪ್ಪರು,
ಜ್ಞಾನದಂತೆ ಇಪ್ಪರು,
ಮುಕ್ತಿಯಂತೆ ಹೋಹರು, ನೋಡಯ್ಯಾ.
ಉರಿಲಿಂಗದೇವಾ, ನಿಮ್ಮ ಶರಣರು ಉಪಮಾತೀತರಾಗಿಉಪಮಿಸಬಾರದು.
-ಉರಿಲಿಂಗದೇವ

































