ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎರಿಯಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಎರಬಲ್ಲುದೆ ?
ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ ?
ದೇವಾಲಯದಲ್ಲಿ ಸತ್ತಡೆ ಸಂಪೊ್ರೀಕ್ಷಣವಲ್ಲದೆ
ದೇವರು ಸತ್ತಲ್ಲಿ ಉಂಟೆ ಸಂಪೊ್ರೀಕ್ಷಣ ?
ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ,
ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ
ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ ?
ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು,
ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು ;
ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು.
-ಅಕ್ಕಮ್ಮ































