ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹಿಡಿಯಿಲ್ಲದ ಶಸ್ತ್ರ, ಕೀಲಿಲ್ಲದ ಕತ್ತರಿ,
ಉಭಯ ಒಡಗೂಡದ ಚಿಮ್ಮುಟ, ರೂಹಿಲ್ಲದ ಚಣ
ಹಲ್ಲಿಲ್ಲದ ಹಣಿಗೆ, ಮಲವಿಲ್ಲದ ಬೆಳಗಿನ ಮುಕುರವ ಹಿಡಿದು
ಶರಣರೆಲ್ಲರ ಅಡಿವಿಡಿದಾಡ ಬಂದೆ.
ಚೆನ್ನಬಸವಣ್ಣಂಗೆ ಭೃತ್ಯನಾಗಿ, ಶರಣತತಿಗೆ ಲೆಂಕನಾಗಿ
ಸತ್ಯ ಗುರುಚರದ ಕರ್ತೃಸ್ವರೂಪಕ್ಕೆ ಡಿಂಗರಿಗ
ಉಭಯ ಡಿಂಗರಿಗರ ಪ್ರತಿ ಡಿಂಗರಿಗರ ಕಂದನೆಂದು
ಪ್ರತಿಪಾಲಿಸಿಕೋಚೆನ್ನಬಸವಣ್ಣಪ್ರಿಯ ಕಮಳೇಶ್ವರಲಿಂಗಾ.
-ಕನ್ನಡಿಕಾಯಕದ ಅಮ್ಮಿದೇವಯ್ಯ





























