ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಆನು ನೀನೆಂಬ ಸಂದೇಹ ಗಗನಕ್ಕೆ ಕೈಯನಿಟ್ಟಂತೆ!
ಕೈ ಗಗನವ ನುಂಗಿತ್ತೊ, ಗಗನ ಕೈಯ ನುಂಗಿತ್ತೊ ಎಂಬುದ
ನಿನ್ನ ನೀ ತಿಳಿದು ತಿಳಿವಿನ ಕಣ್ಣಿಂದ ನೋಡಯ್ಯಾ.
ನಿಜಗುಣವೆಂಬ ಆನಂದರತ್ನವನುಂಗಿದ ರುಚಿಯನು ಏನೆಂದು ಉಪಮಿಸುವೆ?
-ನಿಜಗುಣಯೋಗಿ

































