ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತನುವೆಂಬ ರಾಜ್ಯಕ್ಕೆ ಮನವೆಂಬ ಅರಸು.
ಆ ಅರಸಿಂಗೆ ನೋಟ ಬೇಟದವರಿಬ್ಬರು.
ಅಷ್ಟಮಣಿಹ ಹರಿಮಣಿಹದವರು.
ಅವರ ಸುತ್ತ ಓಲೈಸುವರು ಇಪ್ಪತ್ತೈದು ಮಂದಿ.
ಅವರಿಗೆ ಕತ್ತಲೆಯ ಬಲೆಯ ಬೀಸಿ ಕೆಡಹಿ,
ಅರಸಿನ ಗೊತ್ತುವಿಡಿದು ಉತ್ತರವನೇರಿ
ನಿಶ್ಚಿತವಾಗಿ ನಿಜದಲ್ಲಿ ನಿರ್ವಯಲನೆಯ್ದುವ ಶರಣರ ಪಾದವ ಹಿಡಿದು,ಎತ್ತ ಹೋದೆನೆಂದರಿಯೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
-ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ































