ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಾಮವಿಲ್ಲ, ಕ್ರೋಧವಿಲ್ಲ, ಲೋಭವಿಲ್ಲ,
ಮೋಹವಿಲ್ಲ, ಮದವಿಲ್ಲ, ಮತ್ಸರವಿಲ್ಲ
ಎಂಬ ಅಣ್ಣಗಳಿರಾ, ನೀವು ಕೇಳಿರೊ ಹೇಳಿಹೆನು.
ಕಾಮವಿಲ್ಲದವಂಗೆ ಕಳವಳವುಂಟೆ ?
ಕ್ರೋಧವಿಲ್ಲದವಂಗೆ ರೋಷವುಂಟೆ ?
ಲೋಭವಿಲ್ಲದವಂಗೆ ಆಸೆವುಂಟೆ ?
ಮೋಹವಿಲ್ಲದವಂಗೆ ಪಾಶವುಂಟೆ ?
ಮದವಿಲ್ಲದವಂಗೆ ತಾಮಸವುಂಟೆ ?
ಮತ್ಸರವಿಲ್ಲದವನು ಮನದಲ್ಲಿ ಮತ್ತೊಂದ ನೆನೆವನೆ ?
ಇವು ಇಲ್ಲವೆಂದು ಮನವ ಕದ್ದು ನುಡಿವ
ಅಬದ್ಭರ ಮಾತ ಮೆಚ್ಚುವನೆನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ?
-ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ































