ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಏರಿಕೆಯಾಗಲಿದೆ. ಈ ಹಿನ್ನೆಲೆ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ಹೇಳಿದೆ.
ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್‌ಹೆಚ್‌ಎಐ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದರೊಂದಿಗೆ ಕರ್ನಾಟಕದ ವಾಹನ ಸವಾರರಿಗೆ ಶಾಕ್ ನೀಡಿದಂತಾಗಿದೆ.
ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್‌ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ದರ ಹೆಚ್ಚಳವಾಗಲಿದೆ ಎಂದು ಎನ್‌ಎಚ್‌ಎಐ ಯ ಬೆಂಗಳೂರಿನ ಯೋಜನಾ ನಿರ್ದೇಶಕ ಮಾಹಿತಿ ನೀಡಿದ್ದಾರೆ.