ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನ ಸಾಮಾನ್ಯ ಯೋಜನೆಯಡಿ “ನಿಗಮದಲ್ಲಿ ನೋಂದಣಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಜಿಲ್ಲೆಯ ವಲಸೆ (ಅರೆ ಸಂಚಾರಿ ಮತ್ತು ವಲಸೆ ಕುರಿಗಾರರು) ಕುರಿಗಾರರಿಂದ ಮಾತ್ರ ರಕ್ಷಣ ಪರಿಕರ ಕಿಟ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಲಸೆ ಕುರಿಗಾರರು ತಮ್ಮ ಕುರಿ ಹಾಗೂ ಮೇಕೆಗಳಿಗೆ ಮೇವನ್ನರಸಿ ವಲಸೆ ಹೋದ ಸಂದರ್ಭದಲ್ಲಿ ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ಪರಿಕರ ಕಿಟ್‍ಗಳನ್ನು (ಸಂಚಾರಿ ಟೆಂಟ್, ಸೋಲಾರ್ ಟಾರ್ಚ್, ರಬ್ಬರ್ ಫ್ಲೋರ್ ಮ್ಯಾಟ್, ರೈನ್ ಕೋಟ್) ಒದಗಿಸಲು ಉದ್ದೇಶಿಸಲಾಗಿದೆ.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ವಲಸೆ ಕುರಿಗಾರರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಚಿತ್ರದುರ್ಗ ಇಲ್ಲಿ ಅರ್ಜಿಗಳನ್ನು ಪಡೆದು ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಜೂನ್ 20ರ ಸಂಜೆ 5.30 ರೊಳಗೆ ಸಲ್ಲಿಸಬಹುದು.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿದ ವಲಸೆ ಕುರಿಗಾರರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸ್ಥಳೀಯ ಪಶುವೈದ್ಯರಿಂದ ಸಂಚಾರಿ, ವಲಸೆ ಕುರಿಗಾರರೆಂದು ದೃಢೀಕರಿಸಲ್ಪಟ್ಟಿರಬೇಕು ಎಂದು ಚಿತ್ರದುರ್ಗದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ಸಹಾಯಕ ನಿರ್ದೇಶಕರು ತಿಳಿಸಿದ್ದಾ