ಅಸಂಘಟಿತ ಕಾರ್ಮಿಕರು ಅಪಘಾತ ಪರಿಹಾರಕ್ಕಾಗಿ ಅರ್ಜಿಹಾಕಿ

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ 2021ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದ್ದು, 2022ರ ಮಾರ್ಚ್ 31 ರವರೆಗೆ ನೋಂದಣಿಯಾಗಿ ಮತ್ತು ಈ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ರೂ.2 ಲಕ್ಷಗಳ ಅಪಘಾತ ಪರಿಹಾರ ಒದಗಿಸಲಾಗುವುದು. ಈ ಸಂಬಂಧ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಪಘಾತದಿಂದ ಮರಣ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ,   UAN  ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್/ಪಂಚನಾಮ, In case claimant is minor, Guardian should produce certificate of guardianship issued by District Court while filling the claim.

Advertisement

ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ,  UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆ, Disability certificate issued by the authorised personnel of State/UT Govt.or Unique Disability Identity Card (permanent) issued by Department of Empowerment of Persons with Disabilities, M/O Social Justice & Empowerment, Govt. of India.

ಈ ಮೇಲೆ ತಿಳಿಸಿದ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ಜೆ.ಸಿ.ಆರ್ ಬಡಾವಣೆ, ಎಸ್.ಬಿ.ಐ ಬ್ಯಾಂಕ್ ಹತ್ತಿರ, 1ನೇ ಮಹಡಿ,  ಚಿತ್ರದುರ್ಗ ಇಲ್ಲಿಗೆ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement