ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಸೋಮವಾರ ನಡೆಯಲಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಆಂಧ್ರಪ್ರದೇಶ (25) ಮತ್ತು ತೆಲಂಗಾಣದ (17) ಎಲ್ಲ ಕ್ಷೇತ್ರಗಳಲ್ಲದೆ ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ ಎಂಟು, ಬಿಹಾರದ ಐದು, ಜಮ್ಮು ಮತ್ತು ಕಾಶ್ಮೀರದ ಒಂದು, ಒಡಿಶಾ ಮತ್ತು ಜಾರ್ಖಂಡ್ನ ತಲಾ ನಾಲ್ಕು ಕ್ಷೇತ್ರಗಳಲ್ಲಿ ಮತದಾನಕ್ಕೆ ವೇದಿಕೆ ಸಜ್ಜಾಗಿದೆ.