ದಾವಣಗೆರೆ: ಪ್ರಧಾನಮಂತ್ರಿಯವರು ಏಪ್ರಿಲ್ 28 ರಂದು ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.
ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.