ಈ ಬಾರಿ 5,8 ಹಾಗೂ 9 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ.!

ಬೆಂಗಳೂರು : ಹೌದು ಈ ವರ್ಷವೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಿಸಿದೆ.!

2024-25ರ ಶೈಕ್ಷಣಿಕ ವರ್ಷದಲ್ಲಿಯೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಇರಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ದೃಢಪಡಿಸಿದೆ. 2023-24ರ ಸಾಲಿನಲ್ಲಿ ಈ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿ ಅದು ಕಾನೂನಿನ ಬಿಕ್ಕಟ್ಟಿಗೆ ಸಿಲುಕಿಕೊಂಡು ಸದ್ಯ ಫಲಿತಾಂಶ ಪ್ರಕಟಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪ್ರಕರಣ ನ್ಯಾಯಾಲಯದಲ್ಲಿ ದ್ದರೂ ಸಹ ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಬಗ್ಗೆ ಶೈಕ್ಷಣಿಕ ಮಾರ್ಗದರ್ಶಿ-2024-25ರಲ್ಲಿ ಉಲ್ಲೇಖಿಸಿದ್ದು, ಸೆಪ್ಟೆಂಬರ್‌ನಲ್ಲಿ ಮೌಲ್ಯಾಂ ಕನ-1 ಮತ್ತು ಮಾರ್ಚ್‌ನಲ್ಲಿ ಮೌಲ್ಯಾಂಕನ -2 ಮಾಡಿ ಏಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement