ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯರು ಹೇಳಿದ್ದು ಇದು.!

 

ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದು, ಶೀಘ್ರವೇ ಒಳಮೀಸಲಾತಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು.

Advertisement

ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ. ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ.

ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ.

ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದರು.

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement